ಮೂಡುಬಿದಿರೆ: ಭಿನ್ನ ಸಾಮರ್ಥ್ಯದ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕೆನ್ನುವ ನಿಟ್ಟಿನಲ್ಲಿ ಸ್ಥಾಪನೆಯಾದ ಸ್ಪೂರ್ತಿ ಸಂಸ್ಥೆಗೆ ಸ್ವಂತ ಕಟ್ಟಡಕ್ಕಾಗಿ ಸರ್ಕಾರ ಮತ್ತು ಸಮಾಜವು ಸಂಸ್ಥೆಯೊಂದಿಗೆ ಕೈ ಜೋಡಿಸಬೇಕು ಎಂದು ಬಿಜೆಪಿ(BJP)ಜಿಲ್ಲಾ ಉಪಾಧ್ಯಕ್ಷ ಸುದರ್ಶನ್ ಎಂ. ಹೇಳಿದರು.
ಮೂಡುಬಿದಿರೆ ಸಮಾಜ ಮಂದಿರದ(Samaja madira)ಸಭಾದ ಸ್ವರ್ಣಮಂದಿರದಲ್ಲಿ(Swarna mandira) ನಡೆದ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ(Spoorthi differently abled school) ಮತ್ತು ತರಬೇತಿ ಕೇಂದ್ರದ 5ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮಾಜಿ ಸಚಿವ ಅಭಯಚಂದ್ರ ಜೈನ್(Abhayachandra Jain), ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಕೆಎಂಎಫ್ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಕಾಂಗ್ರೆಸ್ ಮುಖಂಡ ಮಿಥುನ್ ರೈ, ಉದ್ಯಮಿ ಅಬುಲಾಲ್ ಪುತ್ತಿಗೆ, ಸಂಸ್ಥೆಯ ಟ್ರಸ್ಟಿ ಶಶಿಕಲಾ ಗೋಪಾಲ್ ಶೆಟ್ಟಿಗಾರ್, ಪದ್ಮಶಾಲಿ ಸಂಘದ ಸ್ಥಾಪಕಾಧ್ಯಕ್ಷ ರವಿ ಶೆಟ್ಟಿಗಾರ್ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಲತಾ ಸುರೇಶ್ ಉಪಸ್ಥಿತರಿದ್ದರು. ದಾನಿಗಳಾದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ನ(save life charitable trust) ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ಅವರಿಗೆ ಸ್ಫೂರ್ತಿರತ್ನ 2023 (Spoorthi Rathna 2023)ಪ್ರಶಸ್ತಿ ನೀಡಿ ದಂಪತಿ ಸಹಿತ ಗೌರವಿಸಲಾಯಿತು.
ಗೌರವ
ರಾಷ್ಟ್ರಮಟ್ಟದಲ್ಲಿ ನಡೆದ ಕ್ರೀಡೆಯಲ್ಲಿ ಭಾಗವಹಿಸಿ ವಿಶೇಷ ಸಾಧನೆ ಮಾಡಿರುವ ವಿದ್ಯಾರ್ಥಿಗಳಾದ ಶ್ರಾವ್ಯ, ಲಿಖಿತಾ ಮತ್ತು ರಾಫಿಯಾ, ರಾಷ್ಟ್ರಮಟ್ಟದ ತೀರ್ಪುಗಾರರಾಗಿ ಆಯ್ಕೆಯಾಗಿರುವ ಸುಮನಾ ಮತ್ತು ಸಂಧ್ಯಾ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಸಂಸ್ಥೆಯ ಮುಖ್ಯಸ್ಥ ಪ್ರಕಾಶ್ ಶೆಟ್ಟಿಗಾರ್ ಪ್ರಸ್ತಾವನಗೈದರು. ಶಿಕ್ಷಕಿ ಸುಚಿತ್ರಾ ವರದಿ ವಾಚಿಸಿದರು. ಸಂಧ್ಯಾ, ಸುಮನಾ, ಲಕ್ಷಿö್ಮ, ತನಾಝ್ ಮತ್ತು ಸುರೇಖಾ ಸನ್ಮಾನಿತರ ಪತ್ರ ವಾಚಿಸಿದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಅನಿತಾ ರೊಡ್ರಿಗಸ್ ವಂದಿಸಿದರು.
ಸಭಾ ಕಾರ್ಯಕ್ರಮದ ನಂತರ ಸಂಸ್ಥೆಯ ವಿಶೇಷ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಗೊಂಡಿತು.