ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ (Alwas Kannada Medium School of Alwas Education Foundation) 2023-24ನೇ ಶೈಕ್ಷಣಿಕ ಸಾಲಿನ ಉಚಿತ ಶಿಕ್ಷಣದ ಪ್ರವೇಶಾತಿಗಾಗಿ ಪರೀಕ್ಷೆಯು ಮಾರ್ಚ್ 5ರಂದು ವಿದ್ಯಾಗಿರಿಯಲ್ಲಿ (Vidyagiri) ನಡೆಯಲಿದೆ.
ಇದನ್ನ ಓದಿ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಿಂದ 14,158 ಅರ್ಜಿಗಳು ಬಂದಿದ್ದು, 200ರಿಂದ 250 ಸೀಟುಗಳಿಗಾಗಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅರ್ಹತೆಯ (Educational qualification) ಆಧಾರದಲ್ಲಿ ಸಂಸ್ಥೆಯ ಅಧ್ಯಕ್ಷರ ಮಾರ್ಗದರ್ಶನದಂತೆ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. 6 ತರಗತಿಯಿಂದ 9 ತರಗತಿಯವರೆಗಿನ ಪ್ರವೇಶಕ್ಕಾಗಿ ಪರೀಕ್ಷೆ ನಡೆಯಲಿದೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.