ಮೂಡುಬಿದಿರೆ: ಜೀವನದಲ್ಲಿ ಏಕಾಗ್ರತೆ, ಪ್ರಯತ್ನ ಹಾಗೂ ಧೈರ್ಯ ಇದ್ದರೆ, ಸಮಾಜದಲ್ಲಿ ಬಹಳ ದೊಡ್ಡ ವ್ಯಕ್ತಿಗಳಾಗಿ ಬೆಳೆಯುತ್ತೀರಿ ಎಂದು ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ (Assistant Professor, Department of Kannada Studies, Mangalore University) ಡಾ ಧನಂಜಯ ಕುಂಬ್ಳೆ ಹೇಳಿದರು.
ಆಳ್ವಾಸ್ ಕನ್ನಡ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆದ ಇಂಗ್ಲಿಷ್ ಮಾಧ್ಯಮ ಶಾಲೆಯ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು.
ಇದನ್ನ ಓದಿ: ಯಕ್ಷರಂಗದ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು ವಿಧಿವಶ
ಆಳ್ವಾಸ್ ಕಾಲೇಜು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ (Alvas College Post Graduate Department of Social Work) ಸಹ ಪ್ರಾಧ್ಯಾಪಕಿ ಡಾ. ಮಧುಮಾಲ, ಸಹಾಯಕ ಆಡಳಿತಾಧಿಕಾರಿ ರಾಜೇಶ್ ಕುಮಾರ್ ಶೆಟ್ಟಿ, ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಮಲ ಆನಂದ್, ಆಳ್ವಾಸ್ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೀಣಾ ನಾಯಕ, ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಪ್ರಶಾಂತ ಬಿ. ಉಪಸ್ಥಿತರಿದ್ದರು. ವಿದ್ಯಾರ್ಥಿ ವಿರಾಟ್ ಕೃಷ್ಣ ನಿರೂಪಿಸಿದರು.