ಮೂಡುಬಿದಿರೆ: ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಕೆಲಸವನ್ನು ನಿರಂತರ ಮಾಡುತ್ತಾ ಬಂದಿದ್ದೇನೆ. ಡೀಮ್ಡ್ ಫಾರೆಸ್ಟ್(Dimd Forest) ಸಮಸ್ಯೆಯನ್ನು ಬಗೆಹರಿಸಲು ನಿರಂತರ ಹೋರಾಟ ನಡೆಸಿದ್ದು ಕ್ಷೇತ್ರದಲ್ಲಿ ಡೀಮ್ಡ್ ವಿರಹಿತವಾದ 2400 ವಂದಿಗೆ ಹಕ್ಕುಪತ್ರ(Right of way) ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಮೂಡುಬಿದಿರೆ ಕನ್ನಡಭವನದಲ್ಲಿ(Kannada Bhavana) ಮಂಗಳವಾರ ನಡೆದ ಪುರಸಭಾ ವ್ಯಾಪ್ತಿಯ ಜನಸ್ಪಂದನ ಸಭೆಯಲ್ಲಿ 240 ಮಂದಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು. ಕರಾವಳಿ ಭಾಗದ ಪ್ರಮುಖ ಬೇಡಿಕೆಯಾದ ಕುಮ್ಕಿ ಜಮೀನಿನ ಹಕ್ಕು ನೀಡುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು ಇದಕ್ಕೂ ಪರಿಹಾರ ಸಿಗಲಿದೆ ಎಂದರು.
ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷ ಸುಜಾತ ಶಶಿಕಿರಣ್, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಕೆಎಂಎಫ್ ಅಧ್ಯಕ್ಷ ಕೆ.ಪಿ ಸಚರಿತ ಶೆಟ್ಟಿ, ಪುರಸಭೆ ವಿಪಕ್ಷ ನಾಯಕ ಪಿ.ಕೆ ಥೋಮಸ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಶಕುಂತಳಾ ದೇವಾಡಿಗ, ರಾಜೇಶ್ ನಾಯ್ಕ್, ಮುಖ್ಯಾಧಿಕಾರಿ ಇಂದು ಎಂ ಉಪಸ್ಥಿತರಿದ್ದರು.
36 ಮಂದಿಗೆ ಪಿಂಚಣಿ ಪತ್ರ(Pension Letter) ಹಾಗೂ ಕಾರ್ಮಿಕ ಇಲಾಖೆಯಿಂದ ಕಿಟ್‌ಗಳನ್ನು ವಿತರಿಸಲಾಯಿತು.ತಹಸೀಲ್ದಾರ್ ಸಚ್ಚಿದಾನಂದ ಸತ್ಯಪ್ಪ ಕುಚನೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪತಹಸೀಲ್ದಾರ್ ರಾಮ ಕಾರ್ಯಕ್ರಮ ನಿರ್ವಹಿಸಿದರು.