ಮೂಡುಬಿದಿರೆ: ಸಾಂಸ್ಕೃತಿಕ ಸಚಿವಾಲಯ ಭಾರತ ಸರ್ಕಾರದ (Ministry of Culture, Government of India)ಆಯೋಜನೆಯಲ್ಲಿ ಕೇರಳದ ತ್ರಿಶೂರ್(Thrishoor) ನಡೆದ ದಕ್ಷಿಣ ಭಾರತದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕರ್ನಾಟಕದ ಮೂಡಬಿದಿರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ (Excellent English Medium School)ಶಾಲೆಯ ವಿದ್ಯಾರ್ಥಿಗಳಾದ ಆದಿತ್ಯ ಆರ್.ಪುಣಿಚಿತ್ತಾಯ ಮತ್ತು ಅಪ್ರಮೇಯ ಭಟ್ ಸಿದ್ಧಪಡಿಸಿದ ಇಂಧನ ಕಳ್ಳತನ ಪತ್ತೆ ಮಾಡುವ ಯಂತ್ರ ವಿಜ್ಞಾನ ಮಾದರಿಗೆ ಕರ್ನಾಟಕ ರಾಜ್ಯ ವಿಭಾಗದಲ್ಲಿ (Karnataka State Level)ಪ್ರಥಮ ಸ್ಥಾನ ಲಭಿಸಿದೆ.
ವಿಜ್ಞಾನ ಶಿಕ್ಷಕ ನಿರಂಜನ್ ಆರ್.ಪೂಜಾರಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಕಳೆದ ತಿಂಗಳು ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಒಟ್ಟು 15 ವಿಜ್ಞಾನ ಮಾದರಿಗಳು ದಕ್ಷಿಣ ಭಾರತದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಗೊಂಡು ಕರ್ನಾಟಕ ರಾಜ್ಯ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ತಂಡ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಬೋಧಕ, ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.