ಮೂಡುಬಿದಿರೆ: ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ(The second official language of Tulu state) ಘೋಷಿಸುವುದಕ್ಕೆ ಸಂಬಂಧಿಸಿ ಅಧ್ಯಯನ ನಡೆಸಿ ವರದಿ ನೀಡುವುದಕ್ಕಾಗಿ ರಾಜ್ಯ ಸರ್ಕಾರವು(State government) ಒಂಬತ್ತು ಸದಸ್ಯರ ಸಮಿತಿಯೊಂದನ್ನು ರಚಿಸಿದ್ದು ಈ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡಾ. ಎಂ. ಮೋಹನ ಆಳ್ವ ಅವರನ್ನು ಅಖಿಲ ಭಾರತ ತುಳು ಒಕ್ಕೂಟ ಹಾಗೂ ತುಳು ಕೂಟ ಬೆದ್ರ ವತಿಯಿಂದ (Tulu Koota Bedra) ಅಭಿನಂದಿಸಲಾಯಿತು.
ಒಕ್ಕೂಟದ ಪರವಾಗಿ ಚಂದ್ರಹಾಸ ದೇವಾಡಿಗ(Chandrahasa dewadiga) ಹಾಗೂ ತುಳುಕೂಟದ ಪರವಾಗಿ ಅಧ್ಯಕ್ಷರಾದ ಧನಕೀರ್ತಿ ಬಲಿಪ, ಕಾರ್ಯದರ್ಶಿಗಳಾದ ವೇಣುಗೋಪಾಲ ಶೆಟ್ಟಿ, ಜೊತೆ ಕಾರ್ಯದರ್ಶಿ ಸದಾನಂದ ನಾರಾವಿ, ಡಾ.ಯೋಗೀಶ್ ಕೈರೋಡಿ ಹಾಗೂ ಶಿವರಾಮ ಜೆ. ಶೆಟ್ಟಿ ಉಪಸ್ಥಿತರಿದ್ದರು.