ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಅವಕಾಶಗಳಿದ್ದು, ಸವಾಲುಗಳೂ ಎದುರಾಗಿವೆ. ಹೀಗಾಗಿ ಅವರ ಚಿಂತನೆಗಳು ಜಾಗತಿಕ ಮಟ್ಟದಲ್ಲಿ ಇರಬೇಕಾಗಿದೆ. ದೇಶಿಯ ಚಿಂತನೆ ಹಾಗೂ ಅವಕಾಶಗಳನ್ನು ಮೀರಿ ಆಲೋಚಿಸಬೇಕಾಗಿದೆ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ (Alvas Education Foundation President Dr. M. Mohan Alva) ಹೇಳಿದರು.
ಆಳ್ವಾಸ್ ಕಾಲೇಜಿನ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ (Mundrudeguthu K. Amarnath Shetty) ವೇದಿಕೆಯಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದನ್ನ ಓದಿ: ಭಾವನಾತ್ಮಕ ಸ್ವಾತಂತ್ರ್ಯ ತಂತ್ರಗಳು: ಆಳ್ವಾಸ್ ಕಾಲೇಜಿನಲ್ಲಿ ವಿಚಾರ ಸಂಕಿರಣ
ಆಳ್ವಾಸ್ ಶಾಲೆಯ ಆಡಳಿತಾಧಿಕಾರಿ ಪ್ರೀತಮ್ ಕುಂದರ್, ಆಳ್ವಾಸ್ ಕೇಂದ್ರೀಯ ಶಾಲೆಯ ಪ್ರಾಂಶುಪಾಲ ಮೊಹಮ್ಮದ್ ಶಫಿ ಶೇಕ್, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ (Headmaster of Alvas Kannada Medium School) ಪ್ರಶಾಂತ್ ಭಟ್ ಹಾಗೂ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ವಿಜಯಾ ಟಿ. ಮೂರ್ತಿ ಉಪಸ್ಥಿತರಿದ್ದರು.
ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕಿ ಸರ್ವಾಣಿ ಟಿ. ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.