ಮೂಡುಬಿದಿರೆ: ಮಂಗಳೂರು ವಿ.ವಿ. ಮತ್ತು ಹೆಬ್ರಿ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (IMJ Institute of Science and Commerce, Hebri Moodlakatta) ಆಶ್ರಯದಲ್ಲಿ ನಡೆದ ಅಂತರ ವಲಯ ಮಹಿಳೆಯರ ಥ್ರೋಬಾಲ್ ಚಾಂಪಿಯನ್‌ಶಿಪ್‌ನಲ್ಲಿ (Women’s Throwball Championship) ಆಳ್ವಾಸ್ ಕಾಲೇಜು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು.
ಮಂಗಳೂರು ವಿ.ವಿ. ಅಂತರ ವಲಯ ಟೂರ್ನಿಯ ಸೆಮಿಫೈನಲ್‌ನ್ನು ಆಳ್ವಾಸ್ ತಂಡವು ಪದುವಾ ಕಾಲೇಜು ಮಂಗಳೂರು ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆಯನ್ನು ಪಡೆದುಕೊಂಡಿತು. ಫೈನಲ್ ಟೂರ್ನಿಯಲ್ಲಿ ಆಳ್ವಾಸ್ ತಂಡ, ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡದ ವಿರುದ್ಧ 2-0 ನೇರ ಸೆಟ್‌ಗಳ ಅಂತರದಿಂದ ಗೆಲುವು ಸಾಧಿಸಿ ಚಾಂಪಿಯನ್ ಪ್ರಶಸ್ತಿ ಪಡೆಯಿತು.
ಇದನ್ನ ಓದಿ: ಆಳ್ವಾಸ್ ಕಾಲೇಜಿನಲ್ಲಿ ಫಿಲ್ಮ್ ಸೊಸೈಟಿ ಉದ್ಘಾಟನೆ
ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ (Alwas Education Foundation President Dr M Mohan Alva) ಅಭಿನಂದಿಸಿದ್ದಾರೆ.