ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ವತಿಯಿಂದ ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರದ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರಕಾಲೇಜು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜು ಪ್ರತಿನಿಧಿನಿಸಿದ ಆತ್ರಾಡಿ ಪ್ರಮೋದ್ ಶೆಟ್ಟಿ 67ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿ, ಜನವರಿ ಛತೀಸ್‌ಗಢ್ ರಾಜ್ಯದ ಭಿಲಾಸ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿಶ್ವ ವಿದ್ಯಾನಿಲಯದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಅಂತರ್ ವಿ.ವಿ. ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಆಳ್ವಾಸ್ ಸಾಂಸ್ಕೃತಿಕ ಯೋಜನೆಯ ಅಡಿಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಯಾಗಿ ಹಲವಾರು ನಾಟಕದಲ್ಲಿ ಅಭಿನಯಿಸಿ, ರಾಜ್ಯದ ಹಲವೆಡೆ ನಾಟಕ ಪ್ರದರ್ಶನ ನೀಡಿದ್ದಾರೆ. ಪ್ರಸ್ತುತ ದ್ವಿತೀಯ ಬಿ.ಎ. ಪದವಿ ವಿದ್ಯಾರ್ಥಿಯಾಗಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡೆ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧೆಗೈಯುತ್ತಿದ್ದಾರೆ.
ಸಾಧಕ ವಿದ್ಯಾರ್ಥಿಯನ್ನು ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವ , ಟ್ರಸ್ಟಿ ವಿವೇಕ್ ಆಳ್ವ, ರಂಗ ನಿರ್ದೇಶಕ ಡಾ. ಜೀವನ್ ರಾಂ ಸುಳ್ಯ, ಪ್ರಾಂಶುಪಾಲರಾದ ಡಾ. ಕುರಿಯನ್, ದೈಹಿಕ ಶಿಕ್ಷಣ ನಿರ್ದೇಶಕರಾದ ತಿಲಕ್ ಶೆಟ್ಟಿ ಅಭಿನಂದಿಸಿದ್ದಾರೆ.