ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ (Excellent institution) ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು (National Science Day) ಆಚರಿಸಲಾಯಿತು.
ಮಂಗಳೂರು ತಾಂತ್ರಿಕ ಮಹಾವಿದ್ಯಾಯಯದ ಪ್ರೊ. ಮಂಜುನಾಥ ಎಚ್ (Mangalore Technical College Prof. Manjunath H) ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ವಿಜ್ಞಾನವಿಲ್ಲದೆ ಬದುಕಿಲ್ಲ, ವಿಜ್ಞಾನ ನೈಸರ್ಗಿಕವಾಗಿದ್ದು ಪ್ರಪಂಚದಲ್ಲಿ ವಿಜ್ಞಾನದಿಂದ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ ಅದಕ್ಕೆ ಕೊನೆಯೆಂಬುದಿಲ್ಲ, ಪ್ರತಿಯೊಬ್ಬರಲ್ಲಿಯೂ ವಿಶೇಷವಾದ ತಾಂತ್ರಿಕ ಚಿಂತನೆಗಳು ಇರುತ್ತವೆ. ಅವುಗಳನ್ನು ಪ್ರದರ್ಶಿಸಲು ಅವಕಾಶ ನೀಡಬೇಕು. ವಿಜ್ಞಾನ ವ್ಯವಸ್ಥಿತವಾದ ಜ್ಞಾನವನ್ನು ಒದಗಿಸಿವುದರ ಜೊತೆಗೆ ಕಲಿಕೆ ಹರ್ಷದಾಯಕವಾಗಿರಲು ನೆರವಾಗುತ್ತದೆ ಎಂದರು.
ವಿವಿಧ ವಿಜ್ಞಾನ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ವಿವಿಧ ವಿಜ್ಞಾನ ಸ್ಪರ್ಧೆಗಳಲ್ಲಿ (Science competition) ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.
ಇದನ್ನ ಓದಿ: ಜೆಇಇ ಮೈನ್ಸ್ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳಿಂದ ಸಾಧನೆ
ವಿದ್ಯಾರ್ಥಿನಿ ಮೌಲ್ಯ ವೈ.ಆರ್ ಜೈನ್ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕ ನಿರಂಜನ ಪೂಜಾರಿ ವಿಜೇತ ವಿದ್ಯಾರ್ಥಿಗಳ ವಿವರ ವಾಚಿಸಿದರು. ಅಪ್ರಮೇಯ ಭಟ್ ಅತಿಥಿಗಳನ್ನು ಪರಿಚಯಿಸಿದರು. ನಿಶಾಂತ್ ವಿಜ್ಞಾನ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಆದಿತ್ಯ ಕಾರ್ಯಕ್ರಮ ನಿರೂಪಿಸಿದರು. ಅಕ್ಷರಾ ವಂದಿಸಿದರು.