ಮೂಡುಬಿದಿರೆ: ಕರಾವಳಿ ಕೇಸರಿ ಸೇವಾ ಟ್ರಸ್ಟ್ ಬೆದ್ರ(Karavali Kesari trust Bedra) ಹಾಗೂ ಕರಾವಳಿ ಕೇಸರಿ ಮಹಿಳಾ ಘಟಕ ದರೆಗುಡ್ಡೆ(Karavali Kesari women’s organisations Daregudde) ಇವುಗಳ ಸಹಭಾಗಿತ್ವದಲ್ಲಿ ಶನೀಶ್ವರ ಪೂಜೆ(Shaneschar Pooja), ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬಗಳಿಗೆ ಸಹಾಯಧನ ವಿತರಣಾ ಕಾರ್ಯಕ್ರಮವು ದರೆಗುಡ್ಡೆಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ರಾತ್ರಿ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಮಾಜ ಸೇವಕ, ದಾನಿ ಹುರ್ಲಾಡಿ ರಘವೀರ್ ಶೆಟ್ಟಿ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಹಾಗೂ ಸಾರಿಗೆ ಉದ್ಯಮಿ ಜಗದೀಶ್ ಕೋಟ್ಯಾನ್ ಅವರಿಗೆ ಉದ್ಯಮ ರತ್ನಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಅಂತರಾಷ್ಟ್ರೀಯ ಕರಾಟೆಪಟು ಭಾಸ್ಕರ ಪಾಲಡ್ಕ ಮತ್ತು ರಂಗಭೂಮಿ ಕಲಾವಿದ ಅಚ್ಯುತ ಮಾರ್ನಾಡ್ ಅವರನ್ನು ಸನ್ಮಾನಿಸಲಾಯಿತು. ಯುವವಾಗ್ಮಿ ಹಾರಿಕಾ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಿದರು.
ಶಾಸಕ ಉಮಾನಾಥ ಎ.ಕೋಟ್ಯಾನ್, ಉದ್ಯಮಿ ರವೀಂದ್ರ ಶೆಟ್ಟಿ ಬಜಗೋಳಿ, ವಕೀಲ ಶರತ್ ಶೆಟ್ಟಿ, ಹಿಂದೂ ಜಾಗರಣ ವೇದಿಕೆಯ ಮಂಗಳೂರು ಸಹಸಂಚಾಲಕ ಸತೀಶ್ ಮುಂಚೂರು, ಉದ್ಯಮಿ ವೈ.ವಿ ಸತ್ಯಪ್ರಕಾಶ್ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು.
ಕರಾವಳಿ ಕೇಸರಿಯ ಅಧ್ಯಕ್ಷ ಸಂದೀಪ್ ಸುವರ್ಣ ಕೆಲ್ಲಪುತ್ತಿಗೆ, ಗೌರವಾಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ಜೆ.ಸಾಲ್ಯಾನ್, ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಕರಾವಳಿ ಕೇಸರಿಯ ಸ್ಥಾಪಕಾಧ್ಯಕ್ಷ ಸಮಿತ್‌ರಾಜ್ ದರೆಗುಡ್ಡೆ ಸ್ವಾಗತಿಸಿದರು. ಗಣೇಶ್ ಬಿ.ಅಳಿಯೂರು ಮತ್ತು ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನಾಗರಾಜ ಭಟ್(Nagaraja Bhat) ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.