ಮೂಡುಬಿದಿರೆ: ಬನ್ನಡ್ಕದಲ್ಲಿರುವ ವಿಶ್ವ ವಿದ್ಯಾನಿಲಯ ಕಾಲೇಜು ಯುವ ರೆಡ್ ಕ್ರಾಸ್ ಘಟಕದ (Youth Red Cross Unit) ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ (World Health Day) ಕಾರ್ಯಕ್ರಮ ಆಯೋಜಿಸಲಾಯಿತು.
ಇದನ್ನ ಓದಿ: ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ ಸಂಪನ್ನ
ಡಾ.ರಾಯಿ ರಜತ್ ಕುಮಾರ್ (Dr. Rayi Rajat Kumar) ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಉತ್ತಮ ಆರೋಗ್ಯಕ್ಕಾಗಿ ಪಾಲಿಸಬೇಕಾದ ದಿನಚರಿ, ಆರೋಗ್ಯ ಪದ್ಧತಿ, ಆರೋಗ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಶಿಕಲಾ ಎನ್ (Student Welfare Officer Sasikala N), ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಪುಷ್ಪಲತಾ, ಕಾರ್ಯದರ್ಶಿ ರಚನಾ, ಸಹಕಾರ್ಯದರ್ಶಿ ರಕ್ಷಿತ್ ಉಪಸ್ಥಿತರಿದ್ದರು. ವಿದ್ಯಾರ್ಥಿ ರಚನಾ ನಿರೂಪಿಸಿದರು. ವರ್ಷಿತಾ ಸ್ವಾಗತಿಸಿದರು. ಸುರಕ್ಷಾ ವಂದಿಸಿದರು.