ಮೂಡುಬಿದಿರೆ: ಇಲ್ಲಿನ ಹುಡ್ಕೋ ಕಾಲನಿಯ (Hudko colony)ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿಯ 17ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು (Sathyanarayana Pooja)ಶನಿವಾರ ನಡೆಯಿತು.
ಪೂಜಾ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ ಅಧ್ಯಕ್ಷತೆ ವಹಿಸಿದರು. ಮೂಡುಬಿದಿರೆ ಬಂಟರ ಸಂಘದ (Bhantara sangha)ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಉದ್ಯಮಿ ಕೆ.ಶ್ರೀಪತಿ ಭಟ್, ಪುರಸಭಾ ಸದಸ್ಯರಾದ ಕೊರಗಪ್ಪ, ರೂಪಾ ಸಂತೋಷ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹುಡ್ಕೋ ಕಾಲನಿ ನಿವಾಸಿಗಳ ಸಂಘದ ಅಧ್ಯಕ್ಷ ಸುನೀಲ್ ಕುಮಾರ್, ಬಾಂಧವ್ಯ ಮಹಿಳಾ ಸಂಘದ ಅಧ್ಯಕ್ಷೆ ಸೌಮ್ಯ ರಶ್ಮಿತ್ ಶೆಟ್ಟಿ ವೇದಿಕೆಯಲ್ಲಿದ್ದರು. ಬಿ.ಸೀತಾರಾಮ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸ್ಥಳೀಯ ಕಲಾವಿದರಿಂದ ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.