ಮೂಡುಬಿದಿರೆ: ಯಕ್ಷರಂಗದ ಭಾಗವತಿಕೆಯ ಭೀಷ್ಮ (Bhishma of Bhagavatik) ಎಂದೇ ಖ್ಯಾತರಾಗಿರುವ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು (Senior Bhagwat Balipa Narayana Bhagwat) (86) ಗುರುವಾರ ಸಾಯಂಕಾಲ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿರುವ ನೂಯಿ ಸ್ವಗೃಹದಲ್ಲಿ ನಿಧನರಾದರು.
ಕಳೆದ ಕೆಲವು ದಶಕಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮ ಕಂಚಿನ ಕಂಠದ ಮೂಲಕ ಸುಪ್ರಸಿದ್ಧರಾಗಿದ್ದ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದರು.ವರ್ಷ ಪ್ರಾಯದ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ.ನಾಲ್ವರು ಪುತ್ರರ ಪೈಕಿ ಕಳೆದ ವರ್ಷ ಓರ್ವ ಪುತ್ರ ಪ್ರಸಾದ್ ಭಾಗವತರು ನಿಧನರಾಗಿದ್ದರು. ಮೂವರು ಪುತ್ರರು, ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ.
ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ತೆಂಕುತಿಟ್ಟಿನ(Thenkthittu) ಪ್ರಸಿದ್ಧ ಮತ್ತು ಹಿರಿಯ ಭಾಗವತರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ (Kateelu Durgaparameshwari Yakshagana Mela) ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ.ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.
ಬಲಿಪರು ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ ಮಾರ್ಚ್ 13, 1938ರಂದು ಜನಿಸಿದರು. ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. 7ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು 13ನೇ ವರ್ಷದಲ್ಲಿ ರಂಗ ಪ್ರವೇಶಗೈದರು.
ಬಲಿಪ ನಾರಾಯಣ ಭಾಗವತರು 60 ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪಡ್ರೆ ಜಠಾಧಾರಿ ಮೇಳವನ್ನು ಇವರು ಮೊದಲಿಗೆ ಆರಂಭಿಸಿದರು. ಯಕ್ಷಗಾನದ 50ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ ಬಲಿಪರಿಗಿದೆ. 30 ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ. ಕಪ್ಪು ಮೂರು, ಬಿಳಿ ಐದರ ಸ್ವರದಲ್ಲಿ ಬಲಿಪರು ಹಾಡುತ್ತಿದ್ದರು, ತೆಂಕು ತಿಟ್ಟು ಯಕ್ಷ ರಂಗದ ಭೀಷ್ಮ ಎಂದು ಕರೆಯುತ್ತಾರೆ. ಇವರ ಯಕ್ಷಗಾನದ ಸುದೀರ್ಘ ಸೇವೆಗಾಗಿ ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನವನ್ನು ಕಟ್ಟಿಸಿಕೊಟ್ಟಿದ್ದಾರೆ. ಬಲಿಪ ನಾರಾಯಣ ಭಾಗವತರು ದೇವೀ ಮಹಾತ್ಮೆ ಎಂಬ ಮಹಾಪ್ರಸಂಗವನ್ನು ರಚಿಸಿದ್ದು ವೇಣೂರಿನ ಕಜೆ ಸುಬ್ರಹ್ಮಣ್ಯ ಭಟ್ ಮತ್ತು ಅವರ ಸ್ನೇಹಿತರು ಇದನ್ನು ಪ್ರಕಟಿಸಿದ್ದಾರೆ. ಯಕ್ಷಗಾನದ ಇತಿಹಾಸದಲ್ಲೇ ಇದೊಂದು ಮಹತ್ವದ ಕೃತಿಯಾಗಿದೆ.
ಬಲಿಪರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2010(Karnataka Rajyotsava Award 2010), ಸಾಮಗ ಪ್ರಶಸ್ತಿ 2012, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ `ಜ್ಞಾನ ಪ್ರಶಸ್ತಿ’ 2003(Knowledge Award” 2003 by Karnataka Folklore and Yakshagana Academy), ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ 2002, 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ `ಕರ್ನಾಟಕ ಶ್ರೀ ‘ಪ್ರಶಸ್ತಿ, 2003
ಇದನ್ನ ಓದಿ: ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ ಧಾರ್ಮಿಕ ಪ್ರವಾಸ
ಪದವೀಧರ ಯಕ್ಷಗಾನ ಮಂಡಳಿ ಮುಂಬಯಿ `ಅಗರಿ ಪ್ರಶಸ್ತಿ’ 2002, ಶೇಣಿ ಪ್ರಶಸ್ತಿ, 2002, ಕವಿ ಮುದ್ದಣ ಪುರಸ್ಕಾರ, 2003, ಕೂಡ್ಲು ಸುಬ್ರಾಯ ಶ್ಯಾನುಭೋಗ ಪ್ರಶಸ್ತಿ, 2003, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ವತಿಯಿಂದ ಬೆಂಗಳೂರಿನ ರಾಜ್ಯಮಟ್ಟದ ಸನ್ಮಾನ 2003, ಕರ್ನಾಟಕ ಸಂಘ ದುಬೈಯಲ್ಲಿ ಸನ್ಮಾನ (Karnataka Association Dubai), 2003, ಪಾರ್ತಿಸುಬ್ಬ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ (Alvas Nudisiri Award) ಸಂದಿದೆ.