ಮೂಡುಬಿದಿರೆ: ಟಿಪ್ಪುಸುಲ್ತಾನನ್ನು (Tippusultan) ಹೊಡೆದು ಹಾಕಿದಂತೆ ಸಿದ್ಧರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎನ್ನುವ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ ಅಶ್ವತ್ಥನಾರಾಯಣ (Higher Education Minister Dr. C Aswathanarayana) ಅವರು ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ( Former Chief Minister Siddaramaiah) ವಿರುದ್ಧ ಆಕ್ಷೇಪಾರ್ಹ ಮತ್ತು ತುಚ್ಚವಾದ ಮಾತುಗಳನ್ನು ಆಡಿದ್ದು, ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮತ್ತು ರಾಷ್ಟ್ರಪತಿಯವರು ಮುಖ್ಯಮಂತ್ರಿಗೆ ಸೂಚನೆ ನೀಡಬೇಕು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ (Former Minister Abhay Chandra Jain) ಆಗ್ರಹಿಸಿದ್ದಾರೆ.
ಇದನ್ನ ಓದಿ: ಪಿಡಿಒ, ಗ್ರಾಮಲೆಕ್ಕಿಗರ ಕೊರತೆ: ತತ್‌ಕ್ಷಣ ಭರ್ತಿಗೆ ಉಮಾನಾಥ ಕೋಟ್ಯಾನ್ ಆಗ್ರಹ
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರಂತಹ ಮುತ್ಸದ್ಧಿ ರಾಜಕಾರಣಿಗಳನ್ನು ಹೊಂದಿದ್ದ ಬಿಜೆಪಿಯಲ್ಲಿ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕೋಮು ಭಾವನೆ ಕೆರಳಿಸುವಂತಹ ಮಾತು ಆಡಿರುವುದು ಅವರ ಮತ್ತು ಬಿಜೆಪಿ ನಾಯಕರ ಕೀಳು ಮನಸ್ಥಿತಿಯನ್ನು ತೋರಿಸುತ್ತದೆ. ಮತಪಡೆಯವುದಕ್ಕಾಗಿ ಇನ್ನೊಂದು ಪಕ್ಷದ ನಾಯಕರನ್ನು ಟೀಕಿಸುವ ಭರಾಟೆಯಲ್ಲಿ ಕೆಟ್ಟ ಪದಗಳನ್ನು ಬಳಸುವುದು ಯಾವ ನಾಯಕರಿಗೂ ಶೋಭೆ ತರುವಂತದಲ್ಲ ಎಂದರು. ಶಿಕ್ಷಣ ಸಚಿವರ ಮಾತು ಪ್ರಜ್ಞಾವಂತರು ತಲೆತಗ್ಗಿಸುವಂತೆ ಮಾಡಿದೆ ಎಂದು ಹೇಳಿದರು.