ಮೂಡುಬಿದಿರೆ: ಬಿಜೆಪಿಯ ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಸಂಜೆ ತೆಂಕಮಿಜಾರು (Tenkamijaru) ಬಳಿ ಬಿಜೆಪಿಯ ವಿಜಯೋತ್ಸವದ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಶಶಿಕಾಂತ ಶೆಟ್ಟಿಗಾರ್ ಅದೇ ದಾರಿಯಲ್ಲಿ ಬರುತ್ತಿದ್ದಾಗ ಅವರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು ಅವರು ತಪ್ಪಿಸಿಕೊಂಡು ತಮ್ಮ ಅಂಗಡಿಯೊಳಗೆ ಹೋಗಲೆತ್ನಿಸಿದ್ದರೂ ಅಲ್ಲಿಗೆ ಹೋಗಿ ಮೊಬೈಲ್ ಕಿತ್ತುಕೊಂಡಿದ್ದಾರೆ. ಹಲ್ಲೆ ನಡೆಸುವ ದೃಶ್ಯದ ವೀಡಿಯೋ ವೈರಲ್ ಆಗಿದೆ.
ಇದನ್ನ ಓದಿ: ವ್ಯಾಪಕ ನಕಲಿ ಮತದಾನದ ಶಂಕೆ: ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ
ಹಲ್ಲೆಗೊಳಗಾದ ಶಶಿಕಾಂತ ಶೆಟ್ಟಿಗಾರ್ ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ (Moodbidire Government Hospital) ದಾಖಲಾಗಿದ್ದು ಮಾಜಿ ಸಚಿವ ಕೆ. ಅಭಯಚಂದ್ರ ಸಹಿತ ಹಲವಾರು ಕಾಂಗ್ರೆಸ್ ಕಾರ್ಯ ಕರ್ತರು ಆಸ್ಪತ್ರೆಗೆ ಧಾವಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರಲ್ಲಿ ಒತ್ತಾಯಿಸಿದ್ದಾರೆ.
ದಯಾನಂದ ಪೂಜಾರಿ (Dayananda Pujari) ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಮ್ ಸಹಿತ ಹಲವಾರು ಮಂದಿ ಆಸ್ಪತ್ರೆಗೆ ಧಾವಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.