ಮೂಡುಬಿದಿರೆ: ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ (District BJP Backward Classes Morcha) ವತಿಯಿಂದ ಮಾ.19 ರಂದು ಮಧ್ಯಾಹ್ನ 3.30ರಿಂದ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ (Mudubidiri Swaraj Maidan) ಹಿಂದುಳಿದ ವರ್ಗಗಳ ಜಿಲ್ಲಾ ಸಮಾವೇಶ ನಡೆಯಲಿದೆ ಎಂದು ಮೂಲ್ಕಿ – ಮೂಡುಬಿದಿರೆ (Mulki – Moodbidire) ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಸಮಾವೇಶದಲ್ಲಿ 10 ರಿಂದ 15 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ. ಚುನಾವಣೆಯ ಹಿತದೃಷ್ಠಿಯಿಂದ ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ವಿವಿಧ ಸಮಾವೇಶಗಳನ್ನು ಆಯೋಜಿಸಲಾಗಿದೆ. ಕೇಂದ್ರ ಸಚಿವ ಪುರುಷೋತ್ತಮ ರೂಪಾಲ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ನೆ.ಲ ನರೇಂದ್ರ ಬಾಬು, ಬಿಜೆಪಿ ರಾಜ್ಯಕಾರ್ಯದರ್ಶಿ ರವಿಕುಮಾರ್, ಹಾಗೂ ಜಿಲ್ಲೆಯಲ್ಲಿ ಶಾಸಕರು ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ (MLA Umanatha Kotyan) ಮಾತನಾಡಿ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಣಾಳಿಕೆ ರಚನೆಯ ನಿಟ್ಟಿನಲ್ಲಿ ಜನಾಭಿಪ್ರಾಯ ರೂಪಿಸುತ್ತಿದ್ದೇವೆ. ಎಲ್ಲಾ ಸಮುದಾಯದ ಮುಖಂಡರ ಸಭೆಯನ್ನು ಮಾರ್ಚ್ 26 ರಂದು ನಡೆಸಿ ಅವರ ಸಲಹೆ ಪಡೆದು ಪ್ರಣಾಳಿಕೆ ರೂಪಿಸಲಾಗುವುದು. ಎಲ್ಲಾ ಸುಮುದಾಯಗಳಿಗೂ ಸಮಾನ ಆದ್ಯತೆ ನೀಡಲಾಗುವುದು ಎಂದರು.
ಇದನ್ನ ಓದಿ: ಬಿಜೆಪಿ ಮಂಡಲದ ಪ್ರಣಾಳಿಕೆ ಸಲಹಾ ಸಮಿತಿ ಸಭೆ
ಪತ್ರಿಕಾಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಮುಖಂಡ ಮಹೇಶ್ (Backward Classes District Leader Mahesh), ರಾಜೇಶ್, ಮಂಡಲ ಕಾರ್ಯದರ್ಶಿ ಗೋಪಾಲ ಶೆಟ್ಟಿಗಾರ್, ಕೇಶವ ಮತ್ತಿತರರು ಉಪಸ್ಥಿತರಿದ್ದರು.