News Karnataka
ವಿಶೇಷ

ಮೂಡುಬಿದಿರೆಯಲ್ಲಿ ಮಹಿಳಾ ವಿಚಾರಗೋಷ್ಠಿ

Womens conference at moodbidire
Photo Credit : News Karnataka

ಮೂಡುಬಿದಿರೆ: ಮೂಡುಬಿದಿರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(Shri Kshetra Dharmasthala Village Development Scheme B.C Trust) , ಹಾಗೂ ಮಹಿಳಾ ಜ್ಞಾನ ವಿಕಾಸದ ವತಿಯಿಂದ ಸ್ವರಾಜ್ಯ ಮೈದಾನದ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ (Brahmashree Narayanguru Mandir)ತಾಲೂಕು ಮಟ್ಟದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದನ್ವಯ ಮಹಿಳಾ ವಿಚಾರಗೋಷ್ಠಿ ಸೋಮವಾರ ನಡೆಯಿತು.

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್( Former Minister K. Abhayachandra Jain)ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿ ಮಹಿಳೆಯರಿಗೆ ಸಮಾನವಾದ ಹಕ್ಕು ಸಿಗಬೇಕೆಂಬ ಚಿಂತನೆ ಹೇಮಾವತಿ ಹೆಗ್ಗಡೆಯವರಲ್ಲಿ ಇತ್ತು. ಈ ಉದ್ದೇಶದಿಂದ ಜ್ಞಾನವಿಕಾಸ ಕೇಂದ್ರವನ್ನು ಆರಂಭಿಸಿ ಮಹಿಳೆಯರಿಗೆ ಶಕ್ತಿ ತುಂಬುವಂತಹ ಕೆಲಸವನ್ನು ಮಾಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆಂದು ಹೇಳಿದರು.

ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಮಧುಮಾಲಾ ಕೆ, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, “ಸಂಸ್ಕೃತಿ ಸಂಸ್ಕಾರ ಉಳಿಸಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ” (Role of women in preserving culture) ಎಂಬ ವಿಷಯದ ಕುರಿತು ಮಾತನಾಡಿ, ನಮ್ಮ ಮನೆಯ ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ತಿಳಿಸಿಕೊಡುವಲ್ಲಿ ನಾವು ಜಾಗೃತರಾಗಬೇಕಿದೆ. ಕುಟುಂಬದ ಸದಸ್ಯರಿಗೆ ಹೆಚ್ಚಿನ ಸಮಯವನ್ನು ಮೀಸಲಿಡುವ ನಾವು ಮಹಿಳೆಯರು ತಮಗೆ ಎಷ್ಟು ಸಮಯವನ್ನು ಮೀಸಲಿಡುತ್ತಿದ್ದೀರಿ?ಎಂಬುದನ್ನು ನೀವೆ ಪ್ರಶ್ನಿಸಿಕೊಳ್ಳಿ. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಸರಿಯಾದ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಿ. ಮಕ್ಕಳಿಗೆ ಜವಾಬ್ದಾರಿಗಳನ್ನು ಕಲಿಸಿಕೊಡಿ ಜತೆಗೆ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಂತೆ ಮಾಡಿ, ಕಷ್ಟಗಳನ್ನು ಎದುರಿಸುವಂತಹ ಶಕ್ತಿಯನ್ನು ತುಂಬಿ ಅದಕ್ಕೆ ಪೂರಕವಾದ ವಾತಾವರಣವನ್ನು ಮನೆಯಲ್ಲಿ ಸೃಷ್ಟಿಸಿ ಹಾಗೂ ಮಕ್ಕಳಿಗಾಗಿ ಸಮಯವನ್ನು ಮೀಸಲಿಟ್ಟು ತಿಂಗಳಿಗೊಮ್ಮೆಯಾದರೂ ಅವರ ಜತೆ ಹೊರಗೆ ಹೋಗುವಂತಹ ರೂಢಿಯನ್ನು ಬೆಳೆಸಿಕೊಂಡಾಗ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ತಿಳಿಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.ಬಿ.ಸಿ ಟ್ರಸ್ಟ್ ದ.ಕ 1ರ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ (District Director Satish Shetty)ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗುವುದರ ಜೊತೆಗೆ ಆರೋಗ್ಯದ ಬಗ್ಗೆಯೂ ಗಮನಹರಿಸಿ, ಸಮಸ್ಯೆಗಳು ಬಂದಾಗ ಒಗ್ಗಟ್ಟಾಗಿ ಎದುರಿಸುವ ಗುಣಗಳನ್ನು ಮೈಗೂಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಮೂಡುಬಿದಿರೆ ಸೇವಾ ಸಂಘದ ಅಧ್ಯಕ್ಷ ಅಧ್ಯಕ್ಷ ಸುರೇಶ್ ಕೆ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಪರವಾನಿಗೆ ವಿತರಣೆ

ಸ್ವ ಉದ್ಯೋಗಕ್ಕಾಗಿ ರಿಕ್ಷಾ ತರಬೇತಿಯನ್ನು ಪಡೆದುಕೊಂಡಿರುವ ವಿವಿಧ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಾದ ಸುಶೀಲಾ, ಹೇಮಾ, ಲತಾ ಹೆಗ್ಡೆ ಮತ್ತು ದೀಪಿಕಾ ಅವರಿಗೆ ಪರವಾನಿಗೆಯನ್ನು ವಿತರಿಸಲಾಯಿತು.

ಕಾಂಗ್ರೆಸ್ ಮುಖಂಡ ಮಿಥುನ್ ರೈ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ.ಟ್ರಸ್ಟ್ (ರಿ) ಮೂಡುಬಿದಿರೆ ಯೋಜನಾಧಿಕಾರಿ ನಾರಾಯಣ ಶೆಟ್ಟಿ ಸ್ವಾಗತಿಸಿದರು. ವಲಯ ಮೇಲ್ವೀಚಾರಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ವಿದ್ಯಾ ವಂದಿಸಿದರು.

News Karnataka

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *